ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ.

45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K ಹಾಗೂ NRI ಸೀಟ್ ಹಂಚಿಕೆ ಕಳೆದ ವರ್ಷದಂತೆಯೇ ಈ ವರ್ಷವೂ ಮುಂದುವರೆಯಲಿದೆ. 40:30:30 ಅನುಪಾತ ಅಲ್ಪಸಂಖ್ಯಾತ ಹಾಗೂ ಭಾಷಾ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಅನ್ವಯಿಸಲಿದೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದೆ ಎಂದರು.

ಹಿಂದಿನ ವರ್ಷದ ಶುಲ್ಕ ರಚನೆಯನ್ನೇ ಈ ವರ್ಷ ಯಾವುದೇ ಏರಿಕೆಯಿಲ್ಲದೆ ಮುಂದುವರೆಸಲಾಗಿದೆ. ವಿದ್ಯಾರ್ಥಿಗಳಿಗೆ ಅಕ್ಟೋಬರ್ ನಲ್ಲಿ ಆನ್ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author