ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ.

Karnataka TV Contact

ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲವು ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದು ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಅಲ್ಲದೇ, ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದಿದ್ದಾರೆ.

ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು ಎಂದು ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author