Thursday, September 25, 2025

Latest Posts

ಕಾವೇರಿ ಆರತಿ ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

- Advertisement -

ಮಂಡ್ಯದ ಕೆಆರ್‌ಎಸ್‌ನಲ್ಲಿ ಸೆಪ್ಟೆಂಬರ್‌ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್‌ಎಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು.

ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಡಿಕೆಶಿಗೆ, ಕಾವೇರಿ ಆರತಿ ಸಮಿತಿ ಅಧ್ಯಕ್ಷರೂ ಆದ, ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತ ರಾಮ್ ಪ್ರಸಾತ್ ಮನೋಹರ್, ಸಿದ್ಧತೆಗಳ ವಿವರ ನೀಡಿದ್ರು. ಬಳಿಕ ಡಿಕೆಶಿ, ಕಾವೇರಿ ಆರತಿ ಪೂರ್ವ ತಾಲೀಮು ವೀಕ್ಷಣೆ ಮಾಡಿದ್ರು.

ಈ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸಾಥ್‌ ಕೊಟ್ಟಿದ್ರು.

- Advertisement -

Latest Posts

Don't Miss