ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ.

ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ ಮಂತ್ರಾಲಯದ ಗುರುರಾಯರ ಮೂಲಬೃಂದಾವನದಲ್ಲಿ ದರ್ಶನ ಪಡೆಯಲಿದ್ದಾರೆ. ಬಳಿಕ ಗ್ರಾಮದೇವತೆ ಮಂಚಾಲಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಆ ನಂತರ, ಅವರು ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಇರುವ ಜಪದ ಕಟ್ಟೆಗೆ ಭೇಟಿ ನೀಡಿ, ಪೂಜೆ ನೆರವೇರಿಸಲಿದ್ದಾರೆ.
ಅದಾದ ಬಳಿಕ ಗಾಣಧಾಳದ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಹಾಗೂ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಪಂಚಮುಖಿಯಲ್ಲಿ ರಾಯಚೂರು ಗ್ರಾಮೀಣ ಬ್ಲಾಕ್‌ನ ಹೊಸ ಪದಾಧಿಕಾರಿಗಳೊಂದಿಗೆ ಡಿಕೆಶಿ ಸಭೆ ನಡೆಸಲಿದ್ದಾರೆ.
ಸಭೆಯ ಬಳಿಕ ಮಂತ್ರಾಲಯಕ್ಕೆ ಮರಳಿ, ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ನಂತರ ಅವರು ಯಶವಂತಪುರ ರೈಲಿನಲ್ಲಿ ಬೆಂಗಳೂರಿಗೆ ಮರಳಿ ಪ್ರಯಾಣ ಬೆಳೆಸಲಿದ್ದಾರೆ. ಹೀಗಂತ ಡಿಸಿಎಂನ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ

