ತಾತನಾಗಿ ಭಡ್ತಿ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್: ಡಿಫ್ರೆಂಟ್ ಆಗಿ ವಿಶ್ ಮಾಡಿದ ಸಂಸದ ತೇಜಸ್ವಿ ಸೂರ್ಯ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರಿಗೆ ಹೆಣ್ಣು ಮಗು ಜನಿಸಿದ್ದು, ಡಿಕೆಶಿ ತಾತನಾಗಿ ಭಡ್ತಿ ಪಡೆದಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಕೆಶಿ ಅವರಿಗೆ ಡಿಫ್ರೆಂಟ್ ಆಗಿ ವಿಶ್ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದು, ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು.

ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ.

ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ತೇಜಸ್ವಿ ಸೂರ್ಯ ಡಿಕೆಶಿ ಅವರಿಗೆ ವಿಶ್ ಮಾಡಿದ್ದಾರೆ.

About The Author