Tuesday, April 15, 2025

Latest Posts

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

- Advertisement -

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾಧಿಸಿದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಈ ಎರಡೂ ಕ್ಷೇತ್ರದಲ್ಲಿ ಗೆದ್ದಿರುವುದು ನನ್ನ ಕ್ಯಾಪೆಸಿಟಿಯಿಂದಲ್ಲ. ಬದಲಾಗಿ ನಮ್ಮ ಕಾರ್ಯಕರ್ತರ ಶ್ರಮದಿಂದ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾದಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇನ್ನು ಲೋಕಸಭೆ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆಲ್ಲುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಜೆಡಿಎಸ್ ಮತ್ತು ಬಿಜೆಪಿ ಸೇರಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲುತ್ತೇವೆ. ನಮಗೆ ಗೆಲ್ಲಲು ಅಸಾಧ್ಯ ಎನ್ನುವಂಥ ಯಾವುದೇ ಕ್ಷೇತ್ರವಿಲ್ಲ. ಹಾಗಾಗಿ 28ಕ್ಕೆ 28 ಕ್ಷೇತ್ರಗಳನ್ನು ನಿಶ್ಚಿತವಾಗಿ ಗೆದ್ದು ತೋರಿಸುತ್ತೇವೆ ಎಂದಿದ್ದಾರೆ.

ಹಾಗಾದ್ರೆ ಕಾಂಗ್ರೆಸ್ ಗತೀ ಏನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಸಹಜವಾಗಿ ಕಾಂಗ್ರೆಸ್ 28 ಸ್ಥಾನಗಳನ್ನು ಸೋತರೆ, ಡಿ.ಕೆ.ಶಿವಕುಮಾರ್, ಖುಷಿಯಾಗುತ್ತದೆ. ಅವರ ಕನಸು ನನಸಾಗುತ್ತದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಅಲ್ಲದೇ ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಜೆಡಿಎಸ್- ಬಿಜೆಪಿ ಸೇರಿ 28 ಸ್ಥಾನವನ್ನು ಗೆಲ್ಲಲಿದ್ದೇವೆ. ಕಾಂಗ್ರೆಸ್ ಭ್ರಮೆ ಏನು ಅಂತಾ ಅವರಿಗೆ ಈ ದಿನ ಅರ್ಥವಾಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

- Advertisement -

Latest Posts

Don't Miss