Saturday, April 19, 2025

Latest Posts

DK Shivakumar : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್​

- Advertisement -

State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು ಅಂದರೆ ಜುಲೈ 31ರಂದು ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿದ್ದು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ತನಿಖೆಯ ನಂತರ, ಸಿಬಿಐ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು. 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು ಎನ್ನಲಾಗಿದೆ.

Falls : ಜಲಪಾತಗಳಿಗೆ  ಜೀವಕಳೆ : ಪೊಲೀಸರಿಂದ ಬಂದೋಬಸ್ತ್…!

Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!

Strike: ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಮುಷ್ಕರ

- Advertisement -

Latest Posts

Don't Miss