ಅಕ್ಟೋಬರ್17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ ಗಮನಕ್ಕೆ ತಂದಿದ್ದಾರೆಂದು ಹೇಳಲಾಗುತ್ತಿದೆ.
ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ, ಖಾಸಗಿ ಸಂಸ್ಥೆಗಳ ಚಟುವಟಿಕೆಗಳ ಮೇಲೆ ಅಂಕುಶ ಹಾಕುವ ವಿಚಾರ ಮತ್ತು ಅದಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪೂರಕ ನಿರ್ಧಾರ, ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ, ಖರ್ಗೆಯವರಿಗೆ ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.
ಬಿಹಾರದ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ, ಬದಲಾವಣೆಯಾಗುತ್ತದೆ ಎನ್ನುವ ಹೇಳಿಕೆಯನ್ನು, ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಇದು ಎಲ್ಲೋ, ಪಾರ್ಟಿಯಲ್ಲಿ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣನವರು, ಸ್ವಲ್ಪ ತಾಳ್ಮೆಯಿಂದ ಇರಿ, ಬಿಹಾರ ಚುನಾವಣೆ ಮುಗಿಯಲಿ ಎನ್ನುವ ಹೇಳಿಕೆಯನ್ನು ನೀಡಿದ್ದರು. ಈ ವಿಚಾರವನ್ನೂ ಪ್ರಸ್ತಾಪಿಸಿದ್ದಾರಂತೆ.