Banglore News:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಆಯ್ಕೆ ಮಾಡಲಾಗಿದೆ
ಖ್ಯಾತ ಲೇಖಕ ಹಾಗೂ ಚಿಂತಕ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ಲೇಖಕಿ ರಾಜೇಶ್ವರಿ ಅವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಆದರೆ, ಮೃತರ ಹೆಸರು ಇದೀಗ ಪ್ರತಿಷ್ಠಾನದ ಸದಸ್ಯರ ಪಟ್ಟಿಯಲ್ಲಿರುವುದು ಅಚ್ಚರಿ ಉಂಟು ಮಾಡಿದೆ. ರಾಜ್ಯ ಸರ್ಕಾರದ ಈ ಎಡವಟ್ಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಸರ್ಕಾರ ಕೆಂಗಣ್ಣಿಗೆ ಗುರಿಯಾಗಿದೆ.
ಅಂತಿಮ ಪಟ್ಟಿ ಸಿದ್ಧಗೊಳ್ಳುವ ಮುನ್ನವೇ ಇದನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎನೇ ಆದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ ಎನ್ನಬಹುದು.
ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ
ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್
ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ತ್ವರಿತ ವಿತರಣೆಗೆ ಸಿಎಂ ಬೊಮ್ಮಾಯಿ ಸೂಚನೆ