Friday, December 5, 2025

Latest Posts

ಬೆಂಗಳೂರಿನ ಗುಂಡಿ ಮುಚ್ಚಲು ಡೆಡ್‌ಲೈನ್‌

- Advertisement -

ರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರ, ಸದ್ದು ಮಾಡ್ತಿದೆ. ಗುಂಡಿಗಳಿಂದ ಬೇಸತ್ತು ಕಂಪನಿಯನ್ನೇ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ, ಉದ್ಯಮಿಯೊಬ್ರು ಟ್ವೀಟ್‌ ಮಾಡಿದ್ರು. ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಈ ಬೆನ್ನಲ್ಲೇ ಅಲರ್ಟ್‌ ಆಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು, ಅಧಿಕಾರಿಗಳಿಗೆ 1 ವಾರಗಳ ಡೆಡ್‌ಲೈನ್‌ ಕೊಟ್ಟಿದೆ.

ಬೆಂಗಳೂರಿನ ಹಲವೆಡೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ರೌಂಡ್ಸ್‌ ಹಾಕಿದ್ದಾರೆ. ಸಿಲ್ಕ್ ಬೋರ್ಡ್ ಜಂಕ್ಷನ್‍, ಎಚ್‌ಎಸ್ ಆರ್ 5 ಮತ್ತು 6ನೇ ಸೆಕ್ಟರ್, ಅಗರ ಕೆರೆ ರಸ್ತೆ ಮತ್ತು ಜಂಕ್ಷನ್‌, ಇಬ್ಬಲೂರು ಜಂಕ್ಷನ್‌, ಪಣತ್ತೂರು ಮುಖ್ಯ ರಸ್ತೆ ಸೇರಿದಂತೆ, ವಿವಿಧೆಡೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ವೇಳೆ ಬೆಂಗಳೂರು ಪ್ರಾಧಿಕಾರ ಹಾಗೂ
ನಗರ ಪಾಲಿಕೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ 2 ವರ್ಷದಿಂದ ಏನು ಕೆಲಸ ಮಾಡಿದ್ದೀರಿ?. ರಾಜ್ಯ ಸರ್ಕಾರ ಕೊಟ್ಟ ಅನುದಾನ ಏನಾಯಿತು?. ಇಷ್ಟು ಕಳಪೆ ಗುಣಮಟ್ಟದ ಕಾಮಗಾರಿ ಮಾಡಲಾಗಿದೆ. 1 ವಾರದಲ್ಲಿ ನಗರದ ಎಲ್ಲಾ ರಸ್ತೆಗಳು, ಗುಂಡಿ ಮುಕ್ತವಾಗಬೇಕು. 1 ವಾರದ ಬಳಿಕ ಮತ್ತೆ ಪರಿಶೀಲನೆ ನಡೆಸಲಾಗುತ್ತೆ. ಆಗ ಗುಂಡಿ ಕಂಡು ಬಂದ್ರೆ, ಸಂಬಂಧಪಟ್ಟ ಅಧಿಕಾರಿಯನ್ನು ಮುಲಾಜಿಲ್ಲದೇ ಅಮಾನತು ಮಾಡ್ತೀವಿ ಅಂತಾ ಶಾಲಿನಿ ರಜನೀಶ್‌ ಎಚ್ಚರಿಕೆ ನೀಡಿದ್ದಾರೆ.

- Advertisement -

Latest Posts

Don't Miss