Thursday, December 12, 2024

Latest Posts

ಮುರುಡೇಶ್ವರದಲ್ಲಿ ಮೂವರು ವಿದ್ಯಾರ್ಥಿಗಳ ದುರ್ಮರಣ: 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

- Advertisement -

Uttara Kannada News: ನಿನ್ನೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಕೋಲಾರದ ವಸತಿ ಶಾಲೆಯ ಮೂವರು ಮಕ್ಕಳು ಮುರುಡೇಶ್ವರದ ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದರು.

ಸದ್ಯ ಅವರ ಶವಗಳನ್ನು ಹೊರತೆಗೆದಿದ್ದು, ಅವರವರ ಹುಟ್ಟೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪ್ರತೀ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss