ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಮದ್ದೂರು : ತಾಲೂಕಿನ ಬೆಸಗರಹಳ್ಳಿ ಗ್ರಾಮ ಮತ್ತು ಪಡ್ಡೆದೊಡ್ಡಿಗೆ ಸಂಪರ್ಕ ಕಲ್ಪಸುವ ರಸ್ತೆಯಲ್ಲಿ ಶುಕ್ರವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಇಬ್ಬರು ಯುವಕರು ಎಲ್.ಬಿ.ಮೆಡಿಕಲ್ಸ್ ಸ್ಟೋರ್‌ನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ. ಹರಳಹಳ್ಳಿ ಗ್ರಾಮದ ಪ್ರಸನ್ನ (29), ಪಡ್ಡೆದೊಡ್ಡಿ ಗ್ರಾಮದ ವಿನಯ್ (27) ಮೃತರು.

ಎಂದಿನಂತೆ ಮೆಡಿಕಲ್ಸ್ ಸ್ಟೋರ್‌ನಲ್ಲಿ ಕೆಲಸ ಮುಗಿಸಿಕೊಂಡು ಇಬ್ಬರು ಸ್ನೇಹಿತರು ಒಂದೇ ಬೈಕ್‌ನಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದಾಗ ಪಡ್ಡೆದೊಡ್ಡಿ ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬ ರು ಮೃತಪಟ್ಟಿದ್ದಾರೆ.

ಈ ಪ್ರಕರಣವನ್ನು ಬೆಸಗರಹಳ್ಳಿ ಪೊಲೀಸರು ದಾಖಲಿಸಿಕೊಂಡು ತನಿಕೆ ಮಾಡುತ್ತಿದ್ದಾರೆ.

About The Author