BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಕಲುಷಿತ ನೀರು ಕುಡಿದು ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

 

 

About The Author