Friday, December 27, 2024

Latest Posts

Karnataka ; ರೇಷನ್ ಕಾರ್ಡ್ ದಾರರ ಗಮನಕ್ಕೆ; ಈ ದಾಖಲೆ ಕಡ್ಡಾಯ..?

- Advertisement -

ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು.

 

https://ahara.kar.nic.in ವೆಬ್ ಗಮನಿಸಬಹುದಾಗಿದೆ. ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ.

ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.https://ahara.kar.nic.in/home ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ. ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬೀಟ್ ಮಾಡಿ.ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

- Advertisement -

Latest Posts

Don't Miss