ಆಗಸ್ಟ್ 7 ರಂದು ರಾಷ್ಟ್ರೀಯ ಜಾವೆಲಿನ್ ದಿನವನ್ನಾಗಿ ಆಚರಿಸಲು ನಿರ್ಧಾರ

www.karnatakatv.net : ಆಗಸ್ಟ್‌ 7ರಂದು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ನೀರಜ್‌ ಚೋಪ್ರಾ ಅವರು ಇತಿಹಾಸವನ್ನು ಸೃಷ್ಠಿಸಿದ್ದಾರೆ ಆದಕಾರಣ ಆ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಜಾವೆಲಿನ್‌ ದಿನವನ್ನಾಗಿ ಆಚರಿಸಲು ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನಿಸಿದೆ.

23 ವರ್ಷದ ನೀರಜ್‌, ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಟೋಕಿಯೊ ಕೂಟದಲ್ಲಿ ಅವರು 87.58 ಮೀಟರ್ಸ್‌ ಸಾಮರ್ಥ್ಯ ತೋರಿ ಈ ಸಾಧನೆ ಮಾಡಿದ್ದರು.

‘ಜಾವೆಲಿನ್‌ ಥ್ರೊ ಸ್ಪರ್ಧೆಯತ್ತ ಯುವ ಸಮುದಾಯವನ್ನು ಆಕರ್ಷಿಸುವ ಸಲುವಾಗಿ ಮುಂದಿನ ವರ್ಷದಿಂದ ಆಗಸ್ಟ್‌ 7ನ್ನು ರಾಷ್ಟ್ರೀಯ ಜಾವೆಲಿನ್‌ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ.

ಆ ದಿನದಂದು ನಮ್ಮ ಅಧೀನಕ್ಕೊಳಪಡುವ ಎಲ್ಲಾ ಫೆಡರೇಷನ್‌ಗಳು ಜಾವೆಲಿನ್‌ ಸ್ಪರ್ಧೆ ಏರ್ಪ‍ಡಿಸಲಿವೆ’ ಎಂದು ಎಎಫ್‌ಐನ ಯೋಜನಾ ಆಯೋಗದ ಮುಖ್ಯಸ್ಥ ಲಲಿತ್‌ ಭಾನೋಟ್‌ ಮಂಗಳವಾರ ನಡೆದ ಅಭಿನಂದನಾ ಸಮಾರಂಭದ ವೇಳೆ ತಿಳಿಸಿದರು.

ವಿನುತಾ ಹವಾಲ್ದಾರ್ ಕರ್ನಾಟಕ ಟಿವಿ ಬೆಂಗಳೂರು

About The Author