Friday, November 22, 2024

Latest Posts

Dr.Manjunath : ಚನ್ನಪಟ್ಟಣ ಚುನಾವಣೆಗೆ ನನ್ನ ಪತ್ನಿ ಸ್ಪರ್ಧಿಸಲ್ಲ: ಡಾ.ಮಂಜುನಾಥ್

- Advertisement -

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ಚುನಾವಣೆಗೆ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅನಸೂಯ ಅವರನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿತ್ತು.
ಇನ್ನು ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಾ.ಮಂಜುನಾಥ್ ಅವರು, ಡೆಂಘಿಗೆ ನಿಖರವಾದ ಚಿಕಿತ್ಸೆ ಇಲ್ಲ. ಡೆಂಘಿ ಜ್ವರ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ ಆಗಬೇಕು. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಘಿ ನಿಯಂತ್ರಣ ಆಗಲಿದೆ ಎಂದು ಹೇಳಿದರು.

ಡೆಂಗ್ಯೂ ಫೀವರ್​​ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆ ಗಳಲ್ಲಿ ದಾಖಲಾದ ರೋಗಿಗಳಿಗೂ ಸರ್ಕಾರ ದರ ನಿಗದಿ ಮಾಡಿ, ಸರ್ಕಾರವೇ ಭರಿಸಬೇಕು ಎಂದರು. ವಾರ್ ರೂಂ ಆಥವಾ ಕಂಟ್ರೋಲ್ ರೂಂ ಆಗಲಿ ಇದಕ್ಕೆ ಮಾಡಬೇಕು. ಮಾನಿಟರ್ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ಮಂಜುನಾಥ್ ಹೇಳಿದ್ರು.

- Advertisement -

Latest Posts

Don't Miss