- Advertisement -
www.karnatakatv.net : ಕೊರೊನಾ ಮಹಾಮಾರಿಯಿಂದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಸ್ಥಗಿತಗೋಂಡು ಆನ್ ಲೈನ್ ತರಗತಿಯ ಮೂಲಕ ಕ್ಲಾಸ್ ಗಳನ್ನು ನಡೆಸುತ್ತಿದ್ದರು ಆದರೆ ಈಗ ಕೊರೊನಾ ಇಳಿಮುಖ ಮಾಡಿರುವದರಿಂದ ಜುಲೈ 26ರಂದು ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭ ಮಾಡಲು ಸೂಚಿದ್ದಾರೆ.

ಆದರೆ ಈವರೆಗೆ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜತೆಗೆ, ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.
- Advertisement -