- Advertisement -
National News:
ನವದೆಹಲಿಯಲ್ಲಿ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಇಂದು [ಸೆ.9] ಬೆಳಗ್ಗೆ ನಡೆದಿದೆ.
ಕಟ್ಟಡದ ಕೆಲಸ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
- Advertisement -