ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

National News:

Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ  ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್‌ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್‌ ಸಿಸೋಡಿಯಾ ಅವರ ವಿಚಾರಣೆ ನಡೆಯಲು ಆರಂಭವಾಗುತ್ತಿದ್ದಂತೆ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು  ಸಿಬಿಐ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಸಚಿವ ಗೋಪಾಲ್ ರೈ ಸೇರಿದಂತೆ 50 ಜನರನ್ನು ಪೊಲೀಸರು ಬಂಧನ ಕೂಡಾ ಮಾಡಿದ್ದರು. ಈ ಪ್ರದೇಶದಲ್ಲಿ ಸೆಕ್ಷನ್ 144 ಸಿಆರ್‌ಪಿಸಿ ವಿಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ಐಎಎಸ್ ಅಧಿಕಾರಿಯೊಬ್ಬರು ವಿಚಾರಣೆ ವೇಳೆ ಸಿಸೋಡಿಯಾ ಅವರ ಹೆಸರನ್ನು ಹೇಳಿದ್ದರು, ಇದರಿಂದಾಗಿ ಈ ಪ್ರಕರಣದಲ್ಲಿ ಅವರ ಹೆಸರು ಕೂಡ ತಳುಕು ಹಾಕಿಕೊಂಡಿತ್ತು ಎನ್ನಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

150 ಜಾತಿಯ  ಸಿರಿಧಾನ್ಯ ಬೀಜ  ಸಂಗ್ರಹಿಸಿ ಬ್ರಾಂಡ್ ಅಂಬಾಸಿಡರ್ ಆದ ಬುಡಕಟ್ಟು ಮಹಿಳೆ “ಲಹರಿ ಬಾಯಿ”

About The Author