Dehali News:
ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.
ಮೊದಲಿಗೆ ನಿನ್ನೆ [ಆ.26] ಸಂಜೆ 5 ಗಂಟೆ ವೇಳೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷ ಮಾತುಕತೆ ನಡೆಸಿದ್ದು, ಈ ವೇಳೆ ಉಭಯ ನಾಯಕರು ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ, ಎಲ್ಲರೂ ಒಗ್ಗೂಡಿ ಮುಂದಡಿಯಿಡಿ ಎಂದು ಮೋದಿ ಅವರು ಹಿರಿಯ ನಾಯಕನಿಗೆ ಸಲಹೆ ನೀಡಿದ್ದಾರೆಂದು ಹೇಳಲಾಗಿದೆ.
ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ
ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?
ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಸಾಧನೆ ಸಮಾಜಕ್ಕೆ ಮಾದರಿ- ಸಚಿವ ಅಶ್ವತ್ಥ ನಾರಾಯಣ