Dehali News:
ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಠಾಣೆಯ ಇತರ ಪೊಲೀಸರಿಗೆ ವಿಷಯ ತಿಳಿಸಿದರು. ಸಹದ್ಯೋಗಿ ಪೊಲೀಸರು ಬಾಗಿಲು ಬಡಿದರೆ ರಾಹುಲ್ ಬಾಗಿಲು ತೆರೆಯಲಿಲ್ಲ. ಬಳಿಕ ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಬೆಡ್‌ಶೀಟ್‌ನಿಂದ ನೇಣು ಬಿಗಿಕೊಂಡಿರುವುದು ಗೊತ್ತಾಗಿದೆ.
ತಕ್ಷಣ ಪೇದೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ರಾಹುಲ್ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ಸೋಮವಾರದಂದು ಈ ಘಟನೆ ನಡೆದಿದ್ದು, ರಾಹುಲ್ ತ್ಯಾಗಿ ಅವರ ತಂದೆ ನಿರಂತರವಾಗಿ ಕರೆ ಮಾಡಿದರೂ ಸಹ ಅವರು ಸ್ವೀಕರಿಸಿರಲಿಲ್ಲ ಎಂದು ಹೇಳಲಾಗುತ್ತಿದೆ.
ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!