Sunday, April 27, 2025

Latest Posts

ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

- Advertisement -

Dehali News:

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ.

ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತೇನೆ. ಅವರಿಗೆ ನನ್ನ ವಿರುದ್ಧ ಏನೂ ಸಾಕ್ಷಿಗಳು ಸಿಗುವುದಿಲ್ಲ ಎಂಬ ನಂಬಿಕೆ ನನಗಿದೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತಲೇ ಇರುತ್ತದೆ. ನಾವು ಪ್ರಾಮಾಣಿಕರು, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತೇವೆ. ದುರದೃಷ್ಟಕರ ಸಂಗತಿ ಎಂದರೆ ಈ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತದೆ. ಅದಕ್ಕಾಗಿಯೇ ನಮ್ಮ ದೇಶ ಇನ್ನೂ ನಂಬರ್ 1 ಆಗಿಲ್ಲ ಎಂದು ದೆಹಲಿಯ ಶಿಕ್ಷಣ ಕೂಡ ಆಗಿರುವ ಸಚಿವ ಸಿಸೋಡಿಯಾ ಅವರು ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss