Delhi News: ದೆಹಲಿಯ ಮಾಲ್ವಿಯಾ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಳ್ವಿಯಾದಲ್ಲಿರುವ 5 ಅಂತಸ್ತಿನ ಹೋಟೇಲ್ನಲ್ಲಿ, ಇಂದು ಬೆಳಿಗ್ಗೆ 8.50ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ಅಲ್ಲಿದ್ದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಆರೂ ಕೂಡ ಸ್ಥಳದಲ್ಲೇ 20 ಜನ ಮೃತರಾಗಿದ್ದು, ಓರ್ವ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಇನ್ನು ಸಾವನ್ನಪ್ಪಿದವರ ಪೈಕಿ ಕೆಲವರು ವಿದೇಶಿಗರೂ ಸೇರಿದ್ದಾರೆ. 37 ಮಂದಿಯನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಕೂಡ ಅವರಲ್ಲಿ ಕೆಲವರು ತೀವ್ರವಾಗಿ ಗಾಯಗ“ಂಡಿದ್ದು, ಬದುಕುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.
ಈ ಹೋಟೇಲ್ ಸಣ್ಣ ಬೀದಿಯಲ್ಲಿರುವ ಕಾರಣ, ಅಗ್ನಿ ಶಾಮಕ ಸಿಬ್ಬಂದಿಗಳಿಗೆ ರಕ್ಷಣಾ ಕಾರ್ಯಾಚರಣೆ ಸ್ವಲ್ಪ ಕಷ್ಟವೇ ಆಗಿತ್ತು. ಆದರೂ ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿ ಅನಾಹುತದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಘಟನೆ ಬಗ್ಗೆ ಪ್ರಧಾನ ಮಂತ್ರಿ ಸಂತಾಪ ಸೂಚಿಸಿದ್ದಾರೆ.




