Saturday, October 25, 2025

Latest Posts

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

- Advertisement -

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72 ಸಾವಿರ ಜನ ಚೇತರಿಸಿಕೊಂಡಿದ್ದಾರೆ. ಅಲ್ಲದೇ 25 ಸಾವಿರ ಪ್ರಕರಣಗಳಲ್ಲಿ 15 ಸಾವಿರ ಜನರನ್ನು ಮನೆಯಲ್ಲೇ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಪ್ಲಾಸ್ಮಾ ಬ್ಯಾಂಕ್ ರೆಡಿ ಮಾಡಲಾಗಿದೆ. ಪ್ಲಾಸ್ಮಾ ಥೆರಿಪಿಯಿಂದ ಕೊರೊನಾ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ.

ಪ್ಲಾಸ್ಮಾ ದಾನ ಮಾಡುವುದರಿಂದ ಆರೋಗ್ಯ ಸಮಸ್ಯೆ ಕಾಡುವುದಿಲ್ಲ. ಆದ್ರೆ ತುಂಬಾ ಕಡಿಮೆ ಜನ ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಅಗತ್ಯವಿರುವಷ್ಟು ಜನರಿಗೆ ಪ್ಲಾಸ್ಮಾ ಸಿಗುತ್ತಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನಿಮಗೆ ಪ್ಲಾಸ್ಮಾ ದಾನ ಮಾಡಲು ಯಾವುದಾದರೂ ವೈದ್ಯರು ಕೇಳಿದರೆ, ಕೊರೊನ ಸೋಂಕಿತರಿಗೆ ನಿಮ್ಮ ಪ್ಲಾಸ್ಮಾ ದಾನ ಮಾಡಿ ಎಂದು ಅರವಿಂದ್ ಕೇಜ್ರಿವಾಲ್ ದೆಹಲಿ ಜನರಿಗೆ ಕರೆ ನೀಡಿದ್ದಾರೆ.

https://youtu.be/P46hdBAxoT4

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss