Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ.
ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಜ್ರಿವಾಲ್, ದರ್ಶನ ಪಡೆದು ನನಗೆ ಖುಷಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಪಂಜಾಬ್ ಸಿಎಂ ಭಗವಂತ್ ಮಾನ್ ದೇವರ ದರ್ಶನದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ನಾನು ಬಹುದಿನಗಳಿಂದ ಅಯೋಧ್ಯೆಗೆ ಬಂದು ರಾಮಲಲ್ಲಾನ ದರ್ಶನ ಮಾಡಬೇಕು ಎಂದಿದ್ದೆ, ಇಂದು ಅದು ಸಾಧ್ಯವಾಯಿತು. ದೇಶದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಜನರ ಕಿವಿಗೆ ಹೂ ಮುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿ.ವೈ.ವಿಜಯೇಂದ್ರ
ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್ ಕಿಡಿ