ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ದೆಹಲಿ ನ್ಯಾಯಾಲಯದಿಂದ ಜಾಮೀನು

ನವದೆಹಲಿ: 2018ರಲ್ಲಿ ಹಿಂದೂ ದೇವತೆಯೊಬ್ಬರ ವಿರುದ್ಧ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಆರೋಪಿ ಮೊಹಮ್ಮದ್ ಜುಬೇರ್ ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ ಎಂದು ತೀರ್ಪು ನೀಡಿದ ನ್ಯಾಯಾಲಯ, 50,000 ರೂ.ಗಳ ವೈಯಕ್ತಿಕ ಜಾಮೀನಿನ ಬಾಂಡ್ ಮೇಲೆ ಬಿಡುಗಡೆ ಮಾಡಿದೆ.

About The Author