Sunday, June 1, 2025

Latest Posts

ಚನ್ನಪಟ್ಟಣ ಉಪಚುನಾವಣೆ: ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿ ಅಂತಿಮ- ವಿಜಯೇಂದ್ರ

- Advertisement -

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ಹೆಚ್​ಡಿಕೆಯಿಂದ ತೆರವಾಗಿರೋ ಸ್ಥಾನಕ್ಕೆ ಬಿಜೆಪಿ ಎಂಎಲ್​ಸಿ ಯೋಗೇಶ್ವರ್ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ, ಮೈತ್ರಿ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆಯನ್ನು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಕೇಂದ್ರದ ವರಿಷ್ಠರ ಭೇಟಿಯೂ ಪಕ್ಷದ ಸಂಘಟನೆಗೆ ಲಾಭ ತರಬೇಕು ಎಂಬ ಸದುದ್ದೇಶವನ್ನು ಹೊಂದಿರಲಿ ಎಂದು ಆಶಿಸಿದರು. ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಯೋಗೇಶ್ವರ್ ಅವರು ಹೇಳಿದ್ದು, ಅದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದೇ ಆದ ಹಿಡಿತ, ಬೆಂಬಲ ಇದೆ. ಆದರೆ, ಬಿಜೆಪಿ- ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ ಇದು. ಅಲ್ಲಿ ಕುಮಾರಸ್ವಾಮಿ ಅವರು ಆಯ್ಕೆ ಆಗಿದ್ದರು. ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ರು.
ಬಿಜೆಪಿ- ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದೇವೆ. ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸಮಿತಿ ರಚಿಸಿ ಅಭಿಪ್ರಾಯ ಪಡೆದಿದ್ದೇವೆ. ಅಶ್ವತ್ಥನಾರಾಯಣ್ ಅವರ ಸಮಿತಿಯ ವರದಿ ಬಗ್ಗೆ ಮಾಹಿತಿ ಇಲ್ಲ. ನಾನು ಕೂಡ ಅಶ್ವತ್ಥನಾರಾಯಣ್ ಜೊತೆ ಚರ್ಚೆ ಮಾಡುವೆ. ವರಿಷ್ಠರ ಗಮನಕ್ಕೆ ತರುವೆ ಎಂದು ಹೇಳಿದ್ದಾರೆ.

ಇನ್ನೂ, ವಾಲ್ಮೀಕಿ ಹಗರಣರನ್ನು ವಿರೋಧಿಸಿ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರ ಬಳ್ಳಾರಿ ಪಾದಯಾತ್ರೆ ಕುರಿತು ಸ್ಪಷ್ಟನೆ ನೀಡಿದ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು ಸತತವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ಶಕ್ತಿ ಸಿಗುವುದಾದರೆ ಕೆಲವರು ಮಾಡಬಯಸಿದ ಪಾದಯಾತ್ರೆಗೆ ವರಿಷ್ಠರು ಸಮ್ಮತಿ ಕೊಡುತ್ತಾರೆ. ನಮ್ಮದು ಈ ವಿಚಾರಕ್ಕೆ ಯಾವುದೇ ರೀತಿಯ ತಕರಾರಿಲ್ಲ ಎಂದು ತಿಳಿಸಿದ್ರು.

- Advertisement -

Latest Posts

Don't Miss