Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಳಿಕ ಅವರ ಆರೋಗ್ಯ ಹದಗೆಟ್ಟು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಆದರೆ ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ ಎಂದು ಸಂಸತ್‌ ನುಗ್ಗಲು ಯತ್ನಿಸಿದ್ದರು. ಈ ವೇಳೆ ಗಲಾಟೆ ನಡೆದು ಪೋಲೀಸರು ಲಾಠಿ ಪ್ರಹಾರ ಮಾಡಿದ್ದರು.

ಈ ವೇಳೆ ಹಲವರು ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದರು. ಈ ಕಾರಣಕ್ಕೆ ಕಾಂಗ್ರೆಸ್ ಇಂದು ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನ ಮಂತ್ರಿ ನಿವಾಸದ ಎದುರು, ಪ್ರತಿಭಟನೆ ನಡೆಸಿದರು. ಈ ವೇಳೆ ಪೋಲೀಸರು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಲು ಪ್ರಯತ್ನಿಸಿದ್ದು, ರಾಹುಲ್ ಗಾಂಧಿ ನಿರಾಕರಿಸಿದ ಕಾರಣ, ಅವರನ್ನು ಹೊತ್ತೊಯ್ಯುವ ಪರಿಸ್ಥಿತಿ ನಿರ್ಮಾಣವಾಯಿತು. ರಾಹುಲ್ ಜತೆಗೆ ಪ್ರಿಯಾಂಕಾ ವಾದ್ರಾ ಮತ್ತು ಅಖಿಲೇಶ್ ಯಾದವ್‌ರನ್ನು ಪೋಲೀಸರು ಬಂಧಿಸಿದ್ದಾರೆ.

ಈ ಪ್ರತಿಭಟನೆ ರಾತ್ರಿಯಿಡೀ ಇರುತ್ತದೆ ಎಂದು ಕಾಂಗ್ರೆಸ್ಸಿಗರು ಹೇಳಿದ್ದರು. ಆದರೆ ಸಂಜೆ ವೇಳೆ ಸುಮಾರು 6.30ರ ಬಳಿಕ ಪೋಲೀಸರು ಪ್ರತಿಭಟನಾ ನಿರತ ಕಾಂಗ್ರೆಸ್ಸಿಗರನ್ನು ಬಂಧಿಸಿದ್ದಾರೆ. ಈ ಬಗ್ಗೆ ಹಲವು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author