- Advertisement -
www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ ಜಿಲ್ಲಾ ಮಟ್ಟದಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಸೂಚಿಸಿದ್ದಾರೆ. ಇನ್ನು, ಮುಖ್ಯವಾಗಿ ಪತ್ರದಲ್ಲಿ ಜೂನ್ 25ರಂದು ಮೈಸೂರಿನಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳ ಬಗ್ಗೆ ಉಲ್ಲೇಖಿಸಲಾಗಿದ್ದು, ಕೂಡಲೇ ಮೈಸೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
- Advertisement -