Friday, April 19, 2024

Latest Posts

ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

- Advertisement -

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ.

ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು ಒದಗಿಸಿ ನಂತರ ಸೌಲಭ್ಯಗಳನ್ನು ಸಂಬಂಧಿಸಿದ ಅಧಿಕಾರಿಗಳು ವಾಪಾಸ್ ಪಡೆದುಕೊಂಡಿದ್ದಾರೆ.

ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಈ ಹಿಂದೆ ಸಾಕಷ್ಟು ಬಾರಿ ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದರು. ಆದರೇ ಚುನಾವಣಾ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮಾತ್ರ‌ ಸೌಕರ್ಯಗಳನ್ನು ಒದಗಿಸಲಾಗಿತ್ತು, ಇದೀಗ ಸೌಕರ್ಯಗಳು ಸ್ಥಗಿತಗೊಂಡ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮರಳಿ ಸೌಕರ್ಯಗಳನ್ನು ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ‌ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್

- Advertisement -

Latest Posts

Don't Miss