Saturday, November 8, 2025

Latest Posts

ಗಿರೀಶ್ ಮಟ್ಟಣ್ಣವರ್ ವಿರುದ್ಧ ಬಾಂಬ್ ಪ್ರಕರಣ ಮರು ತನಿಖೆಗೆ ಆಗ್ರಹ!

- Advertisement -

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದಲ್ಲಿ ಧರ್ಮಸ್ಥಳ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಮರು ತನಿಖೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಧರ್ಮಸ್ಥಳ ಹೋರಾಟದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿದ್ದ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಮೇಲೆ ಹೊಸದಾಗಿ ಸಮಸ್ಯೆಗಳು ಮುಂದುವರೆದಿವೆ. ವಿಧಾನಸೌಧದ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರೈಂ ನಂ. 243/2005 ಅವನ ಮೇಲೆ ಮಾಡಲಾದ ವಿಚಾರಣೆ ನ್ಯಾಯಾಲಯದಲ್ಲಿ ಮುಕ್ತಾಯವಾಗಿದೆ. ಆದರೆ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈ ಪ್ರಕರಣವನ್ನು ಪುನಃ ತೆರೆದು NIA ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.

ಪ್ರಶಾಂತ್ ಸಂಬರಗಿ ಅವರು ಮಂಡಿಸಿರುವ ದೂರು ಪ್ರಕಾರ, ಗಿರೀಶ್ ಮಟ್ಟಣ್ಣವರ್ ಕೆಲವು ವಿಡಿಯೋಗಳಲ್ಲಿ ತಾವು ಬಾಂಬ್ ತಯಾರಿಸಿ, ಶಾಸಕರ ಭವನದ ಬಳಿ ಇಟ್ಟಿದಾಗಿ ಒಪ್ಪಿಕೊಂಡಿದ್ದಾರೆ. ಈ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ, ಮರು ತನಿಖೆಯ ಅವಶ್ಯಕತೆ ಇರುವುದಾಗಿ ಅವರು ತಿಳಿಸಿದ್ದಾರೆ. ಹಾಗೂ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ವೇಳೆ ಧರ್ಮಸ್ಥಳವು ಟಾರ್ಗೆಟ್ ಆಗಿರಬಹುದೆಂದು ಸಂಶಯವಿದೆ.

ಹೀಗಾಗಿ ಈ ಎರಡು ಪ್ರಕರಣಗಳ ನಡುವೆ ಲಿಂಕ್ ಇದೆಯೇ ಎಂಬುದನ್ನು ತನಿಖೆ ನಡೆಸಬೇಕಿದೆ ಎಂದು ಪ್ರಶಾಂತ್ ಸಂಬರಗಿ ಉಲ್ಲೇಖಿಸಿದ್ದಾರೆ. ಪ್ರಶಾಂತ್ ಸಂಬರಗಿ ಅವರು ಹದಿನೈದು ವಿಡಿಯೋಗಳ ಜೊತೆಗೆ ಈ ಸಂಬಂಧ ದಾಖಲೆಗಳನ್ನು ಪೊಲೀಸ್ ಆಯುಕ್ತರಿಗೆ ಹಾಗೂ ಗೃಹ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದು, ಪ್ರಕರಣದ ಮರು ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss