Monday, December 23, 2024

Latest Posts

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ಅಗ್ರಹ..!

- Advertisement -

www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ.

ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ ಹೇಳಿಕೆ ಪ್ರಾಥಮಿಕ ಬಿಡುಗಡೆ ಮಾಡಿರುವ ಅವರು, ಪದವೀಧರ ಸಂಘದ ಶಿಕ್ಷಕರ ಸಮಸ್ಯೆ ಈಡೇರಿಸುವುದು, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆಗೆ ಆಗ್ರಹಿಸಿದ್ದಾರೆ. ಮುಖ್ಯ ಗುರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು. ಗ್ರಾಮೀಣಾ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರು ಹಾಗೂ ಹಿಂದಿ ಶಿಕ್ಷಕರ ಸಮಸ್ಯೆ ಹೀಗೆ ಶಿಕ್ಷಕರ ಇನ್ನೂ ಹಲವಾರು ಪ್ರಮುಖ ಬೇಡಿಕೆ ಈಡೇರಿಸಬೇಕು ಎಂದು ಶಿಕ್ಷಕರ ಸಂಘ ಸರ್ಕಾರವನ್ನು ಆಗ್ರಹಿಸಿದೆ.

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಇತ್ತೀಚೆಗೆ ಶಿಕ್ಷಕರ ತರಬೇತಿ ಶಿಬಿರ ಬಹಿಷ್ಕರಿಸಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಆದರೆ ಸರ್ಕಾರ ತಮ್ಮ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕೋವಿಡ್ ಸೋಂಕಿನಿoದ ಬೋಧನೆ ಕುಂಠಿತವಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

- Advertisement -

Latest Posts

Don't Miss