Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ.
ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಮತ್ತು ಅಖಿಲೇಶ್ ಯಾದವ್ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ. ಮೈ ತುಂಬಾ ಅರೇಬಿಕ್ ಬರಹಗಳನ್ನು ಹಾಕಿದ್ದ, ಅದಕ್ಕೆ ತ್ರೀ ಈಡಿಯೆಟ್ಸ್ ಎಂಬ ಶೀರ್ಷಿಕೆ ನೀಡಿ ಹರಿಬಿಟ್ಟಿದ್ದೆ ಈಗ ಮುಸ್ಲಿಂ ಸಮುದಾಯದವರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕಾರಣದಿಂದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ವ್ಯಕ್ತಿ ಸುರೇಶ್ (32) ಎಂದು ತಿಳಿದು ಬಂದಿತ್ತು.
ಯಾವಾಗ ಈ ಒಂದು ವಿಷಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿ ಸುರೇಶ್ ನನ್ನ ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಸಮುದಾಯದ ಯುವಕರು ಮುಖಂಡರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಈ ಸಮಯದಲ್ಲಿ ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು ಪ್ರಯೋಜನವಾಗಿಲ್ಲ. ಅಲ್ಲಿ ಸೇರಿದ್ದ ಪ್ರತಿಭಟನಾಕಾರರ ಗುಂಪು ಅದನ್ನು ಕೇಳಲು ರೆಡಿ ಇರ್ಲಿಲ್ಲ . ಪ್ರತಿಭಟನಾಕಾರರು ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ ಹಿನ್ನೆಲೆ , ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ ಎಂದು ತಿಳಿದು ಬಂದಿದೆ .