Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನರಿಗೆ ತ್ವರಿತ ಬಸ್ ಸೇವೆ ಒದಗಿಸುವ ಉದ್ದೇಶದಿಂದ ಚಿಗರಿ ಬಸ್( BRTS) ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸೇವೆಯಾಗಿದೆ. ನಿತ್ಯ ನೂರಾರು ಚಿಗರಿ ಬಸ್‌ಗಳು ಅವಳಿ ನಗರಗಳ ಮಧ್ಯೆ ಓಡಾಡುತ್ತವೆ. ಈ ಚಿಗರಿ ಬಸ್‌ಗಳು ಹವಾನಿಯಂತ್ರಿತವಾಗಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಅನ್ವಯಿಸುವದಿಲ್ಲ. ಹೀಗಿದ್ದರೂ ಪ್ರಯಾಣಿಕರ ಸಂಖ್ಯೆ ಮಾತ್ರ ಕುಗ್ಗಿಲ್ಲ.
ಮಹಿಳೆಯರಿಗೆ ಉಚಿತ ಪ್ರಯಾಣವಿಲ್ಲದಿದ್ದರೂ ಕೂಡ ಚಿಗರಿ ಬಸ್ ಸೇವೆಗೆ ಅವಳಿನಗರದ ಜನರು ಮನಸೋತ್ತಿದ್ದಾರೆ. ಹೌದು..ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಬಿ ಆರ್ ಟಿ ಎಸ್ ಗೆ ಹೆಚ್ಚಿನ ಹೊಡೆತ ಬಿಳಲಿದೆ ಎಂದು ಅಂದಾಜಿಸಲಾಗಿತ್ತು. ಆದ್ರೆ ಅದೆಲ್ಲವನ್ನು ಮೀರಿ ಚಿಗರಿ ಬಸ್ ಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸರ್ಕಾರದ ಆದೇಶದಲ್ಲಿ ಹವಾನಿಯಂತ್ರಿತ, ರಾಜಹಂಸ ಸೇರಿ ಕೆಲ ಬಸ್‌ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಆದರೆ ಚಿಗರಿ ಬಸ್ ವ್ಯವಸ್ಥೆ ರಾಜ್ಯದಲ್ಲಿ ಮೊದಲ ವಿಭಿನ್ನ ಸಿಟಿ ಬಸ್ ಸಂಚಾರವಾಗಿದೆ. ನಿತ್ಯ ಸಾವಿರಾರು ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಇಂತಹ ಸಂಪರ್ಕ ಯೋಜನೆ ಉಚಿತ ಬಸ್ ಪ್ರಯಾಣ ಯೋಜನೆ ವ್ಯಾಪ್ತಿಗೆ ಬಾರದೆ ಇದ್ದರೂ ಕೂಡ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಈ ಬಗ್ಗೆ ನಗರ ಸಾರಿಗೆ ನಿಯಂತ್ರಣಾಧಿಕಾರಿ ಏನಂತಾರೇ ನೋಡಿ..
ಇನ್ನೂ ಶಕ್ತಿ ಯೋಜನೆಯಿಂದಾಗಿ ಬಿ ಆರ್ ಟಿಎಸ್ ಮೇಲೆ ಯಾವುದೇ ಪರಿಣಾಮವಾಗಿಲ್ಲ. ಸಾಮಾನ್ಯ ಸಾರಿಗೆ ನಡುವೆಯೋ ಪ್ರತಿದಿನ ಸರಾಸರಿ 80 ಸಾವಿರದಿಂದ 1 ಲಕ್ಷ ಜನರು ಹುಬ್ಬಳ್ಳಿ -ಧಾರವಾಡ ನಡುವೇ ಸಂಚರಿಸುತ್ತಿದ್ದಾರೆ. ಕಳೆದ ವರ್ಷ ಶಕ್ತಿ ಯೋಜನೆ ಜಾರಿಗೂ ಮುನ್ನ ಯಾವ ರೀತಿ ಪ್ರಯಾಣಿಕರ ದಟ್ಟಣೆ ಇತ್ತು ಅಷ್ಟೇ ಜನ ಪ್ರಯಾಣಿಕರು ಸಂಚಾರ ನಡೆಸುತ್ತಿದ್ದಾರೆ. ಪ್ರಯಾಣಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವಲ್ಲಿ ಇ- ಪಾಸ್ ಕೂಡ ಕಾರಣವಾಗಿದೆ. ಇದು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಿದೆ. ಮೆಟ್ರೋ ಕಾರ್ಡ್ ನಂತೆ ಬಳಕೆ ಮಾಡಬಹುದು. ಆದಾಯದಲ್ಲಿ ಏರಿಕೆಯೂ ಇಲ್ಲ. ನಷ್ಟವೂ ಇಲ್ಲದೆ ಚಿಗರಿ ಬಸ್ ತನ್ನ ಸೇವೆ ಮುಂದಿವರೆಸಿರುವದು ಸಮಾಧಾನಕರ ಸಂಗತಿಯಾಗಿದೆ.
ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ




