Sunday, May 19, 2024

Latest Posts

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

- Advertisement -

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿಲ್ಲ.

ಹಾಗಾಗಿ ನೀವು ಕುಡಿಯಲು ನೀರು ಕೊಟ್ಟರೆ ಮಾತ್ರ ನಾವು ಮತದಾನ ಮಾಡುತ್ತೇವೆ. ಅದು ಸಾಧ್ಯವಾಗದಿದ್ದಲ್ಲಿ, ನಾವು ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಚುನಾವಣೆ ವೇಳೆ ಮಾತ್ರ ರಾಜಕಾರಣಿಗಳು ಗ್ರಾಮಕ್ಕೆ ಬರ್ತಾರೆ ಎಂಬ ಆರೋಪ ಮಾಡಿರುವ ಗ್ರಾಮಸ್ಥರು, ಮನೆ ಮನೆಗೆ ನೀರಿನ ನಲ್ಲಿ ವ್ಯವಸ್ಥೆ ಒದಗಿಸುವವರೆಗೂ ಮತದಾನ ಮಾಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಮತದಾನ ಬಹಿಷ್ಕಾರದ ಬ್ಯಾನರ್ ಪ್ರದರ್ಶಿಸಿ, ಮಹಿಳೆಯರು ಘೋಷಣೆ ಕೂಗಿದ್ದಾರೆ. ಅಲ್ಲದೇ ಖಾಲಿ ಬಿಂದಿಗೆ ಪ್ರದರ್ಶಿಸಿದ್ದಾರೆ. ಇನ್ನು ತಾನು ಗ್ರಾಮ ಪಂಚಾಯ್‌ತಿ ಸದಸ್ಯನಾದ್ರೂ ಗ್ರಾಮಕ್ಕೆ ನೀರು ತರುವಲ್ಲಿ ತಾನು ವಿಫಲನಾಗಿದ್ದೇವೆ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಶ್ಯಾಮಣ್ಣ ಅಳಲು ತೋಡಿಕೊಂಡಿದ್ದಾರೆ.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

- Advertisement -

Latest Posts

Don't Miss