Friday, April 18, 2025

Latest Posts

ಅಭಿವೃದ್ಧಿಯೇ ನಮ್ಮ ತಾಯಿ, ಗ್ಯಾರಂಟಿಗಳೇ ನಮ್ಮ ಬಂಧು ಬಳಗ: ಡಿ.ಕೆ.ಶಿವಕುಮಾರ್

- Advertisement -

Political News: ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅಭಿವೃದ್ಧಿಯೇ ನಮ್ಮ ತಾಯಿ, ಗ್ಯಾರಂಟಿಗಳೇ ನಮ್ಮ ಬಂಧು ಬಳಗ ಎನ್ನುತ್ತಾ ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಅಧಿಕಾರ ನಶ್ವರ, ಕಾಂಗ್ರೆಸ್ ಸರ್ಕಾರದ ಸಾಧನೆಗಳು ಅಜರಾಮರ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೇ ಈಶ್ವರ. ರೋಣ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಲು ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ನಮ್ಮ ಗ್ಯಾರಂಟಿಗಳು ಎಲ್ಲಾ ವರ್ಗದ ಜನರನ್ನು ತಲುಪಿದ್ದು, ಅವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಕೆಶಿ ಹೇಳಿದರು.

ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ಸರ್ಕಾರ ಹಲವು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಮೈಸೂರು ದಸರಾ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗದಗದ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿನ ಸಬರಮತಿ ಆಶ್ರಮದಲ್ಲಿ ಗಾಂಧಿ ಚಿಂತನೆ, ತತ್ವಾದರ್ಶಗಳನ್ನು ಯುವಜನತೆಗೆ ದಾಟಿಸುವ ಚಟುವಟಿಕೆಗಳು ನಡೆಯುತ್ತಿದೆ. ಇದು ದೇಶಕ್ಕೆ ಮಾದರಿಯಾಗಿದೆ. ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಮುಂದಿದ್ದು, ಆರ್ಥಿಕವಾಗಿ ಶಕ್ತಿಶಾಲಿಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -

Latest Posts

Don't Miss