ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು.
ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್ ಗಳನ್ನು ಬೆಂಕಿಗೆ ಆಹುತಿ ಮಾಡಿದರು. ಟಯರ್ ಗೆ ಬೆಂಕಿ ಹಚ್ಚುವ ವಿಚಾರವಾಗಿ ಧಾರವಾಡ ಉಪನಗರ ಪೊಲೀಸ್ ಠಾಣಾಧಿಕಾರಿ ಹಾಗೂ ಶಿವಾನಂದ ಮುತ್ತನ್ನವರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.
ನಂತರ ಪ್ರತಿಭಟನಾಕಾರರು ಟಯರ್ ಗೆ ಬೆಂಕಿ ಹಚ್ಚಲು ಮುಂದಾದರು. ಇದನ್ನು ತಡೆಯಲು ಪೋಲಿಸರು ಮುಂದಾದರು ಇದರ ನಡುವೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ನಂತರ ಬಿಜೆಪಿ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
Hubli Protest: ಮಣಿಪುರ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!