Dharwad: ಚಲಿಸುತ್ತಿದ್ದ ಬಸ್‌ನಿಂದ ಉಗುಳಲು ಹೋಗಿ ಭೀಕರ ಅಪಘಾತ

Dharwad News: ಚಲಿಸುತ್ತಿದ್ದ ಬಸ್‌ನಿಂದ ಉಗಳಲು ಹೋಗಿದ್ದ ವ್ಯಕ್ತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ರುಂಡ ಕಟ್ ಆಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದು, ಈ ವೇಳೆ ಬಸ್‌ನ ಕಿಟಕಿಯಿಂದ ಹೊರಗೆ ಉಗಳಲು ಮುಂದಾಗಿದ್ದರು. ಇದೇ ಸಮಯದಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಅವರ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ರುಂಡ ಕಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author