Dharwad: ತಲೆ ಮರೆಸಿಕೊಂಡಿರುವ ತಮಟಗಾರ ಬಂಧನಕ್ಕಾಗಿ ಅಧಿಕಾರಿಗಳ ತಂಡ ರಚನೆ..

Dharwad News: ಧಾರವಾಡ : ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿರುವ ಹಿನ್ನೆಲೆಯಲ್ಲಿ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಲೆ ಮರೆಸಿಕೊಂಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಇಸ್ಮಾಯಿಲ್ ತಮಟಗಾರ ಸೇರಿದಂತೆ ಇನ್ನಿತರ ಬಂಧನಕ್ಕಾಗಿ ಅಧಿಕಾರಿಗಳ ತಂಡ ರಚಿಸಿದರು.

ಇಸ್ಮಾಯಿಲ್ ತಮಟಗಾರ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಹುಡುಕಲು ಪೊಲೀಸರು ಗೋವಾ ಹಾಗೂ ಮುಂಬೈಗೆ ತೆರಳಿದ್ದಾರೆ. ಅವರು ದೇಶ ಬಿಟ್ಟು ಹೊಡೆಯಬಹುದು ಎಂದು ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸಹ ಇಸ್ಮಾಯಿಲ್ ತಮಟಗಾರ ಬಂಧನಕ್ಕಾಗಿಯೇ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆ ಹಾಗೂ ಇಸ್ಮಾಯಿಲ್ ತಮಟಗಾರ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ತಲಾಶ್ ನಡೆಸಿದ್ದಾರೆ.

ಇನ್ನೂ ಫೈರೋಜ್ ಪಠಾಣ್ ಅವರ ಕುಟುಂಬ ಸದಸ್ಯರು ನಿನ್ನೆ ಸಂಜೆ ಹುಬ್ಬಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಹತ್ಯೆ ಪ್ರಕರಣದಲ್ಲಿ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಪಾತ್ರ ಇದೆ. ಈ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಎಂದು ಮನವಿ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

About The Author