Dharwad News: ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಧಾರವಾಡ ಗ್ರಾಮೀಣ ವಿಧಾನ ಸಭಾ ಹಾಗೂ ನವಲಗುಂದ ವಿಧಾನ ಸಭಾ ಕ್ಷೇತ್ರದ ಅನ್ನದಾತರು ಧರಣಿ ಕೈಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲೆಯಲ್ಲಿ ಅದರಲ್ಲೂ ನವಲಗುಂದ ಭಾಗದಲ್ಲಿ ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಹೆಸರು, ಉದ್ದು, ಸೋಯಾಬಿನ್ ಬೆಳೆಗಳು ಸಂಪೂರ್ಣ ಹಾನಿಗೀಡಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ರೈತರಿಗೆ ಸರ್ಕಾರ ಕೂಡಲೇ ಬೆಳೆಹಾನಿ, ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಡಿಸಿ ಕಚೇರಿ ಎದುರು ಹಾಳಾಗಿರುವ ಹೆಸರು ಕಾಳು ಹಾಗೂ ಹೆಸರು ಬೆಳೆಯನ್ನು ತಂದಿಟ್ಟುಕೊಂಡು ರೈತರು ಧರಣಿ ನಡೆಸಿದ್ದು, ರಾಜ್ಯ ಸರ್ಕಾರ ಶೀಘ್ರ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.