Dharwad News: ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ತಾಯಿ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಸ್ ವೈದ್ಯಕೀಯ ಅಧೀಕ್ಷಕರು ಮಾಹಿತಿ ನೀಡಿದ್ದಾರೆ. ಇಲಿ ಪಾಷಾಣ ಸೇವನೆಯಿಂದ ಅಸ್ವಸ್ಥರಾಗಿದ್ದವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಬಾಲಕಿಯೊಬ್ಬಳು ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾಳೆ. ತಾಯಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ ತಿಳಿಸಿದ್ದಾರೆ.
ಕರಡಿಗುಡ್ಡ ಗ್ರಾಮದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ — ಕಿಮ್ಸ್ನ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ ಅವರು ಮಾಹಿತಿ ನೀಡಿದ್ದಾರೆ.
ತಾಯಿ ಹಾಗೂ ಮಕ್ಕಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಬಾಲಕಿಯೊಬ್ಬಳು ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದು, ತಾಯಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾಲದ ಸಂಕಷ್ಟದ ಹಿನ್ನೆಲೆಯಲ್ಲಿ ನಡೆದಿರುವುದಾಗಿ ಶಂಕಿಸಲಾಗಿರುವ ಈ ಪ್ರಕರಣದಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, ತಾಯಿ ಹಾಗೂ ಇತರ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ವೈದ್ಯಕೀಯ ಅಧೀಕ್ಷಕರ ಮಾಹಿತಿ ಪ್ರಕಾರ, ತಾಯಿಯ ಸ್ಥಿತಿ ಚಿಂತಾಜನಕವಾಗಿದೆ.




