Dharwad: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆ ಪೊಲೀಸ್ ಕಾನ್‌ಸ್ಟೇಬಲ್‌ಗೆ ಪ್ರಶಂಸನಾ ಪತ್ರ

Dharwad: ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆಯಲ್ಲಿ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರಿಗೆ ಪೊಲೀಸ್ ಇಲಾಖೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ.

ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರ ಸೇವೆಯನ್ನು ಗುರುತಿಸಿ ಪೊಲೀಸ್ ಇಲಾಖೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕಿ ಗುಂಜನ್ ಆರ್ಯ ಹಾಗೂ ಬೆಳಗಾವಿ ವಲಯದ ಐಜಿಪಿ ಡಾ. ಕೆ. ತ್ಯಾಗರಾಜನ್ ಅವರು ಪ್ರಶಂಸನಾ ಪತ್ರ ಪ್ರದಾನ ಮಾಡಿ ಅಭಿನಂದಿಸಿದರು.

ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಹಿನ್ನೆಲೆಯಲ್ಲಿ ಈ ಗೌರವ ನೀಡಲಾಗಿದೆ.

ಪ್ರಶಂಸನಾ ಪತ್ರ ಸ್ವೀಕರಿಸಿದ ಶಿವರಾಜ್ ಬಿಂಗಿ ಅವರಿಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದೆಯೂ ಇದೇ ರೀತಿಯ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

About The Author