Dharwad News: ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು.

ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್ ಅವರನ್ನು ಸಚಿವರಾಗಿ ಮುಂದುವರಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ, ಸಂತೋಷ ಲಾಡ್ ಅವರು ಬಡವರ ಪರವಾಗಿ ಹಾಗೂ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ ಮುಂದಿನ ಸಚಿವ ಸಂಪುಟದಲ್ಲಿಯೂ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮರಾಠಾ ಸಮಾಜದ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿದ್ದು, ಸಮಾಜಕ್ಕೆ ಸೇರಿದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರಿಗೂ ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಮರಾಠಾ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಮನೋಹರ ಮೋರೆ ಆಗ್ರಹಿಸಿದರು.

About The Author