Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಪತ್ತೆ: ಓರ್ವ ಯುವಕ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, 20 ವರ್ಷದ ಯುವಕನೊಬ್ಬ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ದೇಶಾದ್ಯಂತ ಆತಂಕ ಸೃಷ್ಟಿಸಿದ್ದ ಡೆಂಗ್ಯೂ ಇದೀಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, ಸೋಂಕಿತ 20 ವರ್ಷದ ಯುವಕನಿಗೆ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿರುವುದು ಆರೋಗ್ಯ ಇಲಾಖೆಯನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಗೂ ಪೂರಕ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ.

ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮತ್ತು ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಅಲ್ಲದೆ, ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಿ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

About The Author