Dharwad News: ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ

Dharwad News: ಧಾರವಾಡದ ಸತ್ತೂರಿನ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯಲ್ಲಿ ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು.

ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ವತಿಯಿಂದ “ಧ್ಯುತಿಧಾರಾ-2026” ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ವಿಧಾನ ಪರಿಷತ್ ಸಭಾಪತಿ ಡಾ. ವೀರಣ್ಣ ಮಠಿಕಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ಹಿರಿಯ ವಕೀಲ ಕೆ.ಎಲ್. ಪಾಟೀಲ್, ಹುಡಾ ಅಧ್ಯಕ್ಷ ಶಾಕಿರ್ ಸನದಿ, ಧಾರವಾಡ ನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ್ ಎಫ್. ಸಿದ್ದನಗೌಡರ್ ಹಾಗೂ ಸ್ವರ್ಣಾ ಗ್ರೂಪ್ ಸಂಸ್ಥಾಪಕ ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್ ಭಾಗವಹಿಸಿದ್ದರು.

ಸಮಾರಂಭದಲ್ಲಿ 2020ನೇ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿದ್ಯಾರ್ಥಿಗಳು, ಪೋಷಕರು ಹಾಗೂ ಕಾಲೇಜಿನ ಅಧ್ಯಾಪಕ ವರ್ಗದ ಸಮ್ಮುಖದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.

About The Author