- Advertisement -
Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ. ಆತನನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಸಿಪಿಐ ಎಸ್.ಎಸ್.ಕಮತಗಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -