Dharwad News: ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

Dharwad: ಕಾಮಗಾರಿ ನಡೆಸದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಕಾಮಗಾರಿ ಆರೋಪಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕಾಮಗಾರಿ ಮಾಡದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್‌ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ವಿವಿಧ ದಾಖಲೆಗಳು, ಕಾಮಗಾರಿಗಳ ವಿವರಗಳು ಹಾಗೂ ಬಿಲ್ ಪಾವತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.

ಧಾರವಾಡ ತಾಲೂಕಿನ ಗರಗ, ತಡಕೋಡ, ಅಮ್ಮಿನಬಾವಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಒಂದು ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳಂತೆ ಗುರುತಿಸಿಕೊಂಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ತಂಡ, ಕಾಮಗಾರಿಗಳ ಅನುಷ್ಠಾನ ಮತ್ತು ಹಣಕಾಸು ವ್ಯವಹಾರಗಳ ಕುರಿತು ಮಾಹಿತಿ ಸಂಗ್ರಹಿಸಿದೆ.

ಪರಿಶೀಲನೆ ವೇಳೆ ಪತ್ತೆಯಾಗುವ ಅಂಶಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

About The Author