Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ, ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಜಮೀನು ಖರೀದಿಸಿದ್ದರು. ಜಮೀನಿನ ಎ-ಖರಾಬ್ ತೆರವುಗೊಳಿಸಿ ಅಭಿವೃದ್ಧಿಪಡಿಸಲು ಮುಂದಾಗಿದ್ದರು ಎನ್ನಲಾಗಿದೆ.
ಎ-ಖರಾಬ್ ತೆರವುಗೊಳಿಸಲು ಬರೋಬ್ಬರಿ ಒಂದು ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂಬ ಆರೋಪ..! ಇದರಲ್ಲಿ 50 ಲಕ್ಷ ರೂಪಾಯಿ ಮೊದಲ ಕಂತಾಗಿ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ..!
ದಾಳಿ ವೇಳೆ 50 ಲಕ್ಷ ರೂಪಾಯಿ ಲಂಚದ ಹಣದೊಂದಿಗೆ ತಹಶೀಲ್ದಾರ್ ಸಿಕ್ಕಿಬಿದ್ದಿರುವುದಾಗಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಕಾರ್ಯಾಚರಣೆಯ ಬೆನ್ನಲ್ಲೇ ಧಾರವಾಡದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತರ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ಲಂಚದ ವಿರುದ್ಧ ಲೋಕಾಯುಕ್ತರ ಬೇಟೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದೇ ವೇಳೆ ಧಾರವಾಡದ ಜೊತೆಗೆ ಹುಬ್ಬಳ್ಳಿ ಮೇಲೂ ಲೋಕಾಯುಕ್ತರು ಕಣ್ಣಿಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹುಬ್ಬಳ್ಳಿಯಲ್ಲೂ ಭ್ರಷ್ಟಾಚಾರದ ಆರೋಪಗಳಿರುವ ಅಧಿಕಾರಿಗಳ ವಿರುದ್ಧ ದೂರುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹ.




