Karnataka TV Impact: ಮಂಟೂರು ರಸ್ತೆ ಬಗ್ಗೆ ಕರ್ನಾಟಕ ಟಿವಿ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

Dharwad News: ಮಂಟೂರ್ ಗ್ರಾಮದ ರಸ್ತೆ ಸಮಸ್ಯೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಕರ್ನಾಟಕ ಟಿವಿ ವರದಿ ಪ್ರಸಾರ ಮಾಡುತ್ತಿದ್ದಂತೆಯೇ ಈಗ ಆಡಳಿತ ಯಂತ್ರ ಚುರುಕಾಗಿದೆ. ಹಲವು ದಿನಗಳಿಂದ ಸಮಸ್ಯೆ ಎದುರಿಸುತ್ತಿದ್ದ ಗ್ರಾಮಸ್ಥರ ಅಳಲಿಗೆ ಕೊನೆಗೂ ಅಧಿಕಾರಿಗಳು ಸ್ಪಂದಿಸಿದ್ದು, ಸ್ಥಳಕ್ಕೆ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಂಟೂರ್ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಹದಗೆಟ್ಟ ರಸ್ತೆ, ಸಾರ್ವಜನಿಕರ ಪರದಾಟ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಕುರಿತು ಕರ್ನಾಟಕ ಟಿವಿ ವರದಿ ಪ್ರಮುಖವಾಗಿ ಬೆಳಕು ಚೆಲ್ಲಿತ್ತು. ವರದಿ ಪ್ರಸಾರವಾದ ನಂತರ ಈಗ ಅಧಿಕಾರಿಗಳು ಸಮಸ್ಯೆಯತ್ತ ಗಮನ ಹರಿಸಿದ್ದಾರೆ.

ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರಿಂದ ಸಮಸ್ಯೆಗಳ ಮಾಹಿತಿ ಪಡೆದುಕೊಂಡ ಅಧಿಕಾರಿಗಳು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ.

ಹಲವು ವರ್ಷಗಳಿಂದ ರಸ್ತೆ ಸಮಸ್ಯೆಗೆ ಪರಿಹಾರ ಸಿಗದೆ ಬೇಸತ್ತಿದ್ದ ಗ್ರಾಮಸ್ಥರು ಈಗ ಅಧಿಕಾರಿಗಳ ಭೇಟಿ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಭೇಟಿ ಮಾತ್ರ ಸಾಲದು, ಶಾಶ್ವತ ಪರಿಹಾರ ಸಿಗಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಟಿವಿ ವರದಿ ಬಳಿಕ ಅಧಿಕಾರಿಗಳು ಸ್ಪಂದಿಸಿರುವುದು ಒಂದು ಹಂತದ ಬೆಳವಣಿಗೆಯಾಗಿದ್ದರೂ, ಈಗ ಜನರ ನಿರೀಕ್ಷೆ ಮಾತಿನ ಭರವಸೆ ಮೇಲೆ ಅಲ್ಲ, ಕೆಲಸದ ಮೇಲೆ ನಿಂತಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಕ್ಯಾಮರ ಪರ್ಸನ್ ಹೇಮಂತ ಜೊತೆ ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ, ಹುಬ್ಬಳ್ಳಿ

About The Author