Dharwad News: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ನಗರದ ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು.
ಈ ವೇಳೆ ಸಚಿವರಾದ ಲಕ್ಷ್ಮಣ ಸವದಿ, ಸಂತೋಷ್ ಲಾಡ್, ಶಾಸಕರಾದ ಎನ್.ಎಚ್. ಕೋನರಡ್ಡಿ, ಶ್ರೀನಿವಾಸ್ ಮಾನೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭ್ಯರ್ಥಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಮೂಲಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.




